September 27, 2026
Sunday, September 27, 2026
spot_img

ಕೊಡಗಿನ ಕರಿಕೆಯಲ್ಲಿ ಶಾಕಿಂಗ್ ಘಟನೆ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗಿನ ಗಡಿ ಗ್ರಾಮವಾದ ಕರಿಕೆಯ ಮೇಲಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೊಳಪಡುವ ಕರಿಕೆ ಗ್ರಾಮದ ಮೇಲಡ್ಕ ಅರಣ್ಯದಲ್ಲಿ ಸಿಬ್ಬಂದಿಗಳು ಬೀಟ್ ತೆರಳುತ್ತಿದ್ದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಘಟನಾ ಸ್ಥಳಕ್ಕೆ ಕರಿಕೆ ಉಪ ಠಾಣಾ ಪೊಲೀಸ್ ಸಿಬ್ಬಂದಿಗಳು, ಭಾಗಮಂಡಲ ಪೊಲೀಸ್ ಠಾಣಾಧಿಕಾರಿ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಸಮೀಪ ನೀಲಿ ಬಣ್ಣದ ಶರ್ಟ್ ಇದ್ದು, ಕಾವಿ ಬಣ್ಣದ ಪಂಚೆಯಲ್ಲಿ ನೇಣು ಕುಣಿಕೆ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕರಿಕೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read