July 15, 2026
Wednesday, July 15, 2026
spot_img

ಕುಶಾಲನಗರದಲ್ಲಿ ಶಾಕಿಂಗ್‌ ಘಟನೆ : ಕಟ್ಟಡದ ಮೇಲಿನ ಕೇಬಲ್‌ ವೈರ್‌ಗೆ ಸಿಲುಕಿ ವ್ಯಕ್ತಿ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ಅಪರಿಚಿತ ವ್ಯಕ್ತಿಯೊಬ್ಬರು ಕಟ್ಟಡದ ಮೇಲಿನಿಂದ ಕೇಬಲ್ ವೈರ್‌ಗೆ ಸಿಲುಕಿ ಮೃತಪಟ್ಟ ಘಟನೆ ಕುಶಾಲನಗರದ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ.

ಕಟ್ಟಡದ ಮೇಲಿನಿಂದ ಕೆಳಗೆ ಬೀಳುವಾಗ ಕೇಬಲ್ ವೈರ್‌ನಲ್ಲಿ ಸಿಲುಕಿಕೊಂಡು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ.

ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದಲ್ಲಿ ಕುಶಾಲನಗರ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !