ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆ ದಾಳಿ ನಡೆಸಿದ ಪರಿಣಾಮ ಆಟೋ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಎಂಬಲ್ಲಿ ನಡದಿದೆ. ಆಟೋ ಚಾಲಕ ಕಿರಣ್ ಎಂಬವರೇ ಗಂಭೀರ ಗಾಯಗೊಂಡವರಾಗಿದ್ದಾರೆ.
ಸೋಮವಾರ ಬೆಳಗ್ಗೆ 10.30 ಗಂಟೆ ಸಮಯದಲ್ಲಿ ಆಟೋದಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಆಟೋ ಸಂಪೂರ್ಣ ಜಖಂಗೊಳ್ಳುವುದರೊಂದಿಗೆ, ಚಾಲಕ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ.
ಸ್ಥಳೀಯರು ಅವರನ್ನು ಗೋಣಿಕೊಪ್ಪದ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ ಚಾಲಕನ ಚಿಕಿತ್ಸಾ ವೆಚ್ಚವನ್ನು ಇಲಾಖೆಯಿಂದ ಭರಿಸುವುದಾಗಿ ಭರವಸೆ ನೀಡಿದ್ದಾರೆ.