September 18, 2026
Friday, September 18, 2026
spot_img

ಮಂಗಳೂರಿನಲ್ಲಿ ಶಾಕಿಂಗ್ ಘಟನೆ: ಮನೆ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಚಿರತೆ!

ಹೊಸದಿಗಂತ ವರದಿ ಮಂಗಳೂರು:

ನಗರದ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ವಿಡಿಯೋವೊಂದು ಜಾಲಾತಾಣಗಳಲ್ಲಿ ಸದ್ದು ಮಾಡುತ್ತಿದೆ.

ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಬಾಯಿಯಲ್ಲಿ ಕಚ್ಚಿಕೊಂಡು ತೆರಳುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:

ಈ ಭಾಗದಲ್ಲಿ ಚಿರತೆ ಸಂಚಾರ ಇದೆ ಎಂಬ ಸುದ್ದಿಗಳ ನಡುವೆಯೇ ರಾತ್ರಿ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. ಇದೇ ವೇಳೆ‌ ಈ ಪರಿಸರದಲ್ಲಿ ಮತ್ತಷ್ಟು ಚಿರತೆಗಳ ಸಂಚಾರವಿದೆ ಎಂಬ ಅನುಮಾನವೂ ಕಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಸಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅರಣ್ಯ ಇಲಾಖೆ ಅಲರ್ಟ್ ಆಗಿದ್ದು, ಚಿರತೆಯ ಚಲನಲನಗಳ‌ ಮೇಲೆ ನಿಗಾ ಹೆಚ್ಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !