ಹೊಸದಿಗಂತ, ಮಂಗಳೂರು:
ಉಡುಪಿ ಜಿಲ್ಲೆಯ ಮಣಿಪಾಲ ಶಿವಳ್ಳಿ ಗ್ರಾಮದ ಕಾಲೇಜು ಬಳಿ ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಅಪರಿಚಿತ ವ್ಯಕ್ತಿಯೋರ್ವ ಬರೋಬ್ಬರಿ ಮೂರೂವರೆ ಲಕ್ಷ ರೂ. ಬೆಲೆಬಾಳುವ ಸರ ದರೋಡೆಗೈದು ಪರಾರಿಯಾದ ಘಟನೆ ನಡೆದಿದೆ.
ಪರ್ಕಳ ಹೆರ್ಗ ನಿವಾಸಿ ವಸಂತಿ ಎಂಬವರು ಸರ ಕಳೆದುಕೊಂಡವರಾಗಿದ್ದಾರೆ. ಇವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಬಿಲ್ಲಿಂಗ್ ಕೆಲಸ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಸಂಜೆ ಹೊತ್ತು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.