October 9, 2026
Friday, October 9, 2026
spot_img

ಬೆಂಗಳೂರು ಏರ್‌ಪೋರ್ಟ್ ಬಳಿ ಶಾಕಿಂಗ್ ಘಟನೆ: ಇಬ್ಬರು ಹೆಣ್ಣುಮಕ್ಕಳನ್ನು ಕೊಂ*ದು ಆತ್ಮಹ*ತ್ಯೆಗೆ ಯತ್ನಿಸಿದ ತಂದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ತಾಜ್ ಹೋಟೆಲ್‌ನ ಕೊಠಡಿಯೊಂದರಲ್ಲಿ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

ಹೋಟೆಲ್ ರೂಮ್‌ನಲ್ಲಿ ದುರಂತ

ವಿಮಾನ ನಿಲ್ದಾಣದ ಸಮೀಪದ ತಾಜ್ ಹೋಟೆಲ್‌ನ ನಾಲ್ಕನೇ ಮಹಡಿಯ ಕೊಠಡಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಕ್ಕಳನ್ನು 5 ವರ್ಷದ ಶೇಕ್ ಜೆಹರಾ ಹಾಗೂ 10 ವರ್ಷದ ಶೇಕ್ ಜೋಯಾ ಎಂದು ಗುರುತಿಸಲಾಗಿದೆ. ಮಕ್ಕಳ ತಂದೆ ಇಮ್ರಾನ್ ಕೃತ್ಯ ಎಸಗಿದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೆತ್‌ನೋಟ್ ಪತ್ತೆ

ಪೊಲೀಸ್ ಮೂಲಗಳ ಪ್ರಕಾರ, ಇಮ್ರಾನ್ ಮುಂಚಿತವಾಗಿಯೇ ಹೋಟೆಲ್‌ನಲ್ಲಿ ಕೊಠಡಿ ಕಾಯ್ದಿರಿಸಿದ್ದ ಎನ್ನಲಾಗಿದೆ. ಘಟನೆಯ ಬಳಿಕ ಡೆತ್‌ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದ್ದು, ಅದರಲ್ಲಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:

ಆಸ್ಪತ್ರೆಗೆ ದಾಖಲು

ಬೆಂಗಳೂರಿನ ನಾಗವಾರ ನಿವಾಸಿಯಾಗಿರುವ ಇಮ್ರಾನ್, ಖಾಸಗಿ ಕ್ಯಾಬ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಗಂಭೀರ ಸ್ಥಿತಿಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಕುರಿತು ಏರ್‌ಪೋರ್ಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Must Read