ಶಾಕಿಂಗ್ ವಿಡಿಯೋ: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಚಿಕ್ಕವರು, ದೊಡ್ಡವರು ಎಂಬ ಭೇದವಿಲ್ಲದೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾಯುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಈಕ್ವೆಡಾರ್‌ನ ಜಿಮ್‌ನಲ್ಲಿ ನಡೆದಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಯುವತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಸಹಚರರು ತಕ್ಷಣ ಅವಳ ಬಳಿಗೆ ಹೋಗಿ ಎಬ್ಬಿಸಲು ಪ್ರಯತ್ನಿಸಿದರೂ ಪ್ರಯತ್ನವಾಗಲಿಲ್ಲ. ಕೂಡಲೇ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದರು.

ಮೃತರನ್ನು ಡಯಾನಾ ರಾಮಿರೆಜ್ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 28 ವರ್ಷ. ಈಕ್ವೆಡಾರ್‌ನ ಝೋನಾ ಮಸ್ಕ್ಯುಲರ್ ಜಿಮ್‌ನಲ್ಲಿ ಈ ಘಟನೆ ನಡೆದಿದೆ. ವರ್ಕೌಟ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಣ್ಣೆದುರೇ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಸಹೋದ್ಯೋಗಿಗಳನ್ನು ಬೆಚ್ಚಿ ಬೀಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!