SHOCKING | ಇಸ್ತಾಂಬುಲ್ ನೈಟ್‌ಕ್ಲಬ್ ನಲ್ಲಿ ಬೆಂಕಿ ಅವಘಡ: 29 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್‌:  

ಟರ್ಕಿಯ ಇಸ್ತಾಂಬುಲ್‌ನ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಸಂಭವಿಸಿದ್ದು, 29 ಮಂದಿ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಇದೇ ವೇಳೆ ರಕ್ಷಣಾ ತಂಡ ನೈಟ್‌ಕ್ಲಬ್‌ನಲ್ಲಿ ಬೆಂಕಿಯ ಕೆನ್ನಾಲಿಗೆ ಸಿಲುಕಿದ ಹಲವರನ್ನು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ.

29 ಮಂದಿ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇನ್ನು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಹಲವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿ ಅವಘಡ ಕುರಿತು ಮಾಹಿತಿ ನೀಡಿರುವ ಸಚಿವ ಯಲಿಮಾಜ್ ಟಂಕ್, ಘಟನೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗಾಯದ ಪ್ರಮಾಣ ಹೆಚ್ಚಿರುವ ಕಾರಣ ಆತಂಕವೂ ಹೆಚ್ಚಾಗಿದೆ ಎಂದಿದ್ದಾರೆ.

ಇಸ್ತಾಂಬುಲ್‌ನ ಖ್ಯಾತ್ ನೈಟ್ ಕ್ಲಬ್ ಇದಾಗಿದೆ. ಆದರೆ ಈ ನೈಟ್‌ಕ್ಲಬ್‌ನಲ್ಲಿ ನವೀಕರಣ ಕೆಲಸ ನಡೆಯುತ್ತಿತ್ತು. ಹೀಗಾಗಿ ಕಾರ್ಮಿಕರು ಮಾತ್ರ ಒಳಗಿದ್ದರು. ನವೀಕರಣ ಕಾಮಾಗಾರಿ ನಡೆಯುತ್ತಿರುವ ಕಾರಣ ನೈಟ್‌ಕ್ಲಬ್‌ನ್ನು ಕಳೆದ ಕೆಲ ದಿನಗಳಿಂದ ಮುಚ್ಚಲಾಗಿದೆ ಎಂದು ಯಲಿಮಾಜ್ ಟಂಕ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!