March 24, 2026
Tuesday, March 24, 2026
spot_img

SHOCKING | ಬಿರುಗಾಳಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಕಲಬುರಗಿ: ಸಿಡಿಲೇಟಿಗೆ ಯುವಕನ ಬಲಿ

ಹೊಸದಿಗಂತ ವರದಿ, ಕಲಬುರಗಿ:

ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಾಯಂಕಾಲ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟ ದುರ್ಘಟನೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ.

ಮೃತರನ್ನು ಮಹೇಶ ಚೌವ್ಹಾಣ್ (24) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಕಬ್ಬು ನಾಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !