SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು, ಈ ಬೆಳವಣಿಗೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಿರುವೈಲು ಸರ್ಕಾರಿ ಶಾಲೆಯ ಸಮೀಪವಿರುವ ಕೆತ್ತಿಕಲ್ ಗುಡ್ಡದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಹೆದ್ದಾರಿಯತ್ತ ಜಾರಲಾರಂಭಿಸಿವೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಗುಡ್ಡದ ಮಣ್ಣು ಸಡಿಲಗೊಂಡಿದ್ದು, ಕುಸಿತದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ವ್ಯಕ್ತವಾಗಿದೆ. ತಡೆಗೋಡೆ … Continue reading SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ