ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರರಂಗಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಕಾಲಿವುಡ್ ನ ಖ್ಯಾತ ನಟ ಡೆಲ್ಲಿ ಗಣೇಶ್ (80) ವಿಧಿವಶರಾಗಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ತಮಿಳು ನಟ ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ತಮ್ಮ ತಂದೆಯ ನಿಧನವನ್ನು ಮಾಧ್ಯಮಗಳಿಗೆ ಅಧಿಕೃತವಾಗಿ ಘೋಷಿಸಿದ್ದಾರೆ.
ಡೆಲ್ಲಿ ಗಣೇಶ್ ಸುಮಾರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕಮಲ್ ಹಾಸನ್ ಅವರ ಇಂಡಿಯನ್ 2 ಡೆಲ್ಲಿ ಗಣೇಶ್ ಅವರ ಕೊನೆಯ ಚಿತ್ರವಾಗಿತ್ತು.