ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಓರ್ವ ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಮೃತನನ್ನು ಅಸ್ಸಾಂ ಮೂಲದ ಕಾರ್ಮಿಕ ಮುಜಿಬುರ್ ಎಂದು ಗುರುತಿಸಲಾಗಿದೆ.
ಶೃಂಗೇರಿ ತಾಲೂಕಿನ ನೆಮ್ಮಾರು ಎಂಬಲ್ಲಿ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಣ್ಣಿನ ದಿಬ್ಬ ಕುಸಿದಿದೆ. ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕ ಮುಜಿಬುರ್ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ