ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಅವರು ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಟ ದಿಲೀಪ್ ಹೋಟೆಲ್‌ನ ಕೊಠಡಿಯಲ್ಲಿ 4 ದಿನಗಳ ಹಿಂದೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ 2 ದಿನಗಳಿಂದ ದಿಲೀಪ್ ರೂಮ್‌ನಿಂದ ಹೊರಗೆ ಬಂದಿರಲಿಲ್ಲ. ಡಿ.29ರಂದು ರೂಮ್‌ನಿಂದ ದುರ್ವಾಸನೆ ಬಂದ ಹಿನ್ನೆಲೆ ಪರಿಶೀಲನೆ ನಡೆಸಿದಾಗ ದಿಲೀಪ್ ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರವಾದ ಕಾರಣ ಪತ್ತೆಯಾಗಲಿದೆ.
ದಿಲೀಪ್ ಅವರ ಸಹ ನಟರು ಅವರಿಗೆ ಫೋನ್ ಕರೆ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಳವಳಗೊಂಡು ಅವರನ್ನು ಪರೀಕ್ಷಿಸಲು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿವೆ.