August 26, 2026
Wednesday, August 26, 2026
spot_img

SHOCKING | ತ್ರಿಶೂರ್ ನ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ: ಆರು ಮಂದಿ ಸಜೀವದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳಂನ ತ್ರಿಶೂರ್‌ನಲ್ಲಿ ಭೀಕರ ದುರಂತ ಸಂಭವಿಸಿದ್ದು, ಪಟಾಕಿ ತಯಾರಿಕಾ ಕೇಂದ್ರದಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಪ್ರಸಿದ್ಧ ತ್ರಿಶೂರ್ ಪೂರಂ ಉತ್ಸವಕ್ಕೆ ಪಟಾಕಿ ತಯಾರಿಸುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಈ ವೇಳೆ 40 ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದರು. ಪಟಾಕಿಗಳಿಗೆ ಬಳಸುವ ಸುಮಾರು 2,000 ಕೆಜಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿತ್ತು.

ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತು ಮಾಹಿತಿ ನೀಡಿದ ಸ್ಥಳೀಯ ಅಧಿಕಾರಿಗಳು, ಗಾಯಗೊಂಡವರನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು , ಗಾಯಗೊಂಡವರಿಗೆ ಸಮಗ್ರ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !