August 27, 2026
Thursday, August 27, 2026
spot_img

SHOCKING | ಪಂಜಾಬ್‌ ಬಿಜೆಪಿ ಕಚೇರಿ ಹೊರಗೆ ಭಾರೀ ಸ್ಫೋಟ: ಸ್ಥಳಕ್ಕೆ ಭದ್ರತಾ ಪಡೆಗಳು ದೌಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂಡೀಗಢದ ಸೆಕ್ಟರ್ 37ರಲ್ಲಿರುವ ಪಂಜಾಬ್ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ಭದ್ರತಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಬುಧವಾರ ಸಂಜೆ ಘಟನೆ ಸಂಭವಿಸಿದ್ದು, ಕೂಡಲೇ ಭದ್ರತಾ ಅಧಿಕಾರಿಗಳು ಬಿಜೆಪಿ ಕಚೇರಿಯ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ರಾಜ್ಯ ಬಿಜೆಪಿ ನಾಯಕ ವಿನೀತ್ ಜೋಶಿ ಮಾಹಿತಿ ನೀಡಿದ್ದು, ಸಂಜೆ ಸುಮಾರು 5 ಗಂಟೆಯ ವೇಳೆಗೆ ಭಾರಿ ಸದ್ದು ಕೇಳಿಬಂದಿದ್ದು, ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿ ಪರಿಶೀಲಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !