ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿ, ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ಘಟನೆಯ ಸಮಯದಲ್ಲಿ ಬಸ್’ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಅಧಿಕಾರಿಗಳು ವರದಿ ಮಾಡಿದ್ದಾರೆ.
ವಶೇಷಗಳಡಿ ಇನ್ನೂ ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಬೆಟ್ಟದ ಇಳಿಜಾರಿನಲ್ಲಿ ಬೃಹತ್ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಉರುಳಿ ಬಸ್‌ನ ಮೇಲೆ ಬಿದ್ದು ಈ ದುರಂತ ನಡೆದಿದೆ. ರಕ್ಷಣಾ ಕಾರ್ಚಾರಣೆ ನಡೆಯುತ್ತಿದೆ.
ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.