ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.