March 23, 2026
Monday, March 23, 2026
spot_img

SHOCKING | ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಶ*ವ ಪತ್ತೆ!

ಹೊಸದಿಗಂತ ಮುಂಡಗೋಡು:

ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಗಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಅತೀ ಭೀಕರವಾದ ಕೊಲೆಯೊಂದು ಬೆಳಕಿಗೆ ಬಂದಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಕುರುಹು ಸಿಗಬಾರದೆಂದು ತಲೆಯನ್ನು ಬೇರ್ಪಡಿಸಿ ಬೆತ್ತಲೆ ಸ್ಥಿತಿಯಲ್ಲಿ ಶವವನ್ನು ಎಸೆದು ಹೋಗಿದ್ದಾರೆ.

ಕೊಳಗಿ ಗ್ರಾಮದ ಮಹಿಳೆಯೊಬ್ಬರು ಸೌದೆ ತರಲು ಅರಣ್ಯಕ್ಕೆ ತೆರಳಿದ್ದಾಗ ಈ ಭಯಾನಕ ದೃಶ್ಯ ಕಂಡುಬಂದಿದೆ. ಮೃತದೇಹದ ಮೇಲೆ ಮರಗಳ ಟೊಂಗೆ ಹಾಗೂ ಸೊಪ್ಪುಗಳನ್ನು ಹಾಕಿ ಮುಚ್ಚಲಾಗಿತ್ತು. ಇದನ್ನು ಕಂಡು ಗಾಬರಿಗೊಂಡ ಮಹಿಳೆ ತಕ್ಷಣ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ. ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಮುಂಡಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹದ ಹತ್ತಿರವೇ ಗುಂಡಗಡಗಿ (ಲಿಂಗ) ಪತ್ತೆಯಾಗಿದ್ದು, ಇದು ಹತ್ಯೆಯ ಹಿಂದೆ ಯಾವುದಾದರೂ ಧಾರ್ಮಿಕ ಅಥವಾ ವೈಯಕ್ತಿಕ ಹಿನ್ನೆಲೆ ಇದೆಯೇ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ಕೃತ್ಯವು ಸುಮಾರು ಎರಡು ದಿನಗಳ ಹಿಂದೆಯೇ ನಡೆದಿದೆ ಎಂದು ಅಂದಾಜಿಸಲಾಗಿದೆ. ಹಂತಕರು ಮಹಿಳೆಯ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದಲೇ ಶಿರಚ್ಛೇದ ಮಾಡಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ಮಹಿಳೆಯ ಗುರುತು ಪತ್ತೆ ಹಚ್ಚಲು ಮತ್ತು ಹಂತಕರನ್ನು ಬಂಧಿಸಲು ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !