SHOCKING NEWS | ಸುರತ್ಕಲ್ ಪರಿಸರದಲ್ಲಿ ಅಘೋಷಿತ ಕರ್ಫ್ಯೂ ಸ್ಥಿತಿ: ಎಲ್ಲೆಡೆ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ಮಂಗಳಪೇಟೆ ನಿವಾಸಿ ಫಾಜಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದ್ದು, ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಯುವಕನ ಮೇಲೆ ದಾಳಿ ಘಟನೆಯ ಬೆನ್ನಿಗೇ ಸುರತ್ಕಲ್ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಸುರತ್ಕಲ್ ಪರಿಸರದಲ್ಲಿ ಅಘೋಷಿತ ಕರ್ಫ್ಯೂ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹತೋಟಿ ತಪ್ಪದಂತೆ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಿಂದಲೂ ಹೆಚ್ಚುವರಿ ಪೊಲೀಸ್ ಪಡೆ ಕರೆಸಿಕೊಳ್ಳಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!