ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡಿನ ಧನ್‌ಬಾದ್‌ನಲ್ಲಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿಗುತ್ತಿದೆ.
ಧನ್‌ಬಾದ್‌ನ ಆಶೀರ್ವಾದ್ ಟವರ್ಸ್, ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬೆಂಕಿ ವೇಗವಾಗಿ ಹರಡಿದ್ದು,ಸ್ಥಳಕ್ಕೆ ಅಗ್ನಿಶಾಮಕ ದಳದವರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಲಾಗುತ್ತಿದೆ.