ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಮೊದಲ ಬಲಿಯಾಗಿದೆ.
ಮಂಗಳೂರಿನ ಹೊರ ವಲಯದ ಮುಲ್ಕಿಯ ಕೊಲ್ನಾಡು ಎಂಬಲ್ಲಿ ಧಾರಾಕಾರ ಮಳೆಗೆ ಕೊಚ್ಚಿಹೋದ ವ್ಯಕ್ತಿ ಶವವಾಗಿ ಪತ್ತೆಯಾಗಿದೆ. ಸುನೀಲ್ (46) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿಯಿಂದಲೇ ಭಾರಿ ಗಾಳಿ, ಮಳೆ ಆರಂಭವಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.