ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರಾಬಾದ್’ನಲ್ಲಿ ಶನಿವಾರ ನಡೆದ ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸರಣಿಯ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಗಾಯಗೊಂಡಿದ್ದಾರೆ.
ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕರ ಕೈಗೆ ಗಾಯವಾಗಿದೆ.ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ಸಣ್ಣ ಶಸ್ತ್ರಚಿಕಿತ್ಸೆ ನಡೆಸಿದರು ಎನ್ನಲಾಗ್ತಿದೆ.