SHOCKING NEWS | ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಜಿಲ್ಲೆಯಲ್ಲಿ ನಟ ದರ್ಶನ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಈ ವೇಳೆ ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿ ಬಳಿಯಲ್ಲಿ ಇಂದು ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು.ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ.

ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ರೂ ವಿದ್ಯುತ್ ತಂತಿ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ.

ಈ ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಲೋಕಸಭಾ ಚುನಾವಣಾ ಪ್ರಚಾರ ಮೊಟಕುಗೊಳಿಸಿ, ಬೆಂಗಳೂರಿಗೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!