Wednesday, June 7, 2023

Latest Posts

SHOCKING NEWS | ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಮತ್ತು ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಅವರು ಶವವಾಗಿ ಪತ್ತೆಯಾಗಿದ್ದಾರೆ.

ತಮ್ಮ 11ನೇ ಮಹಡಿಯ ಎತ್ತರದ ಕಟ್ಟಡದ ಶೌಚಾಲಯದಲ್ಲಿ ಆದಿತ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರೋದನ್ನು ಆತನ ಸ್ನೇಹಿತ ಕಂಡುಕೊಂಡಿದ್ದಾನೆ.

ಬಳಿಕ ಕಟ್ಟಡದ ಭದ್ರತಾ ಸಿಬ್ಬಂದಿ ಸಹಾಯದಿಂದ ಪಕ್ಕದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಆಸ್ಪತ್ರೆಯಲ್ಲಿ ನಟ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ, ಸಾವಿಗೆ ಕಾರಣ ಡ್ರಗ್ ಓವರ್ಡೋಸ್ ಆಗಿರಬಹುದು ಎನ್ನಲಾಗುತ್ತಿದೆ.

ಆದಿತ್ಯ ದೆಹಲಿ ಮೂಲದವರಾಗಿದ್ದು, ರೂಪದರ್ಶಿಯಾಗಿ ತಮ್ಮ ವೃತ್ತಿಜೀವನವನ್ನ ಪ್ರಾರಂಭಿಸಿದರು. ಕ್ರಾಂತಿವೀರ್ ಮತ್ತು ಮೈನೆ ಗಾಂಧಿ ಕೋ ನಹೀನ್ ಮಾರಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದು, ಅವರು ಸುಮಾರು 300 ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಸ್ಪ್ಲಿಟ್ಸ್ವಿಲ್ಲಾ 9ನಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದು, ಲವ್, ಆಶಿಕಿ, ಕೋಡ್ ರೆಡ್, ಆವಾಜ್ ಸೀಸನ್ 9, ಬ್ಯಾಡ್ ಬಾಯ್ ಸೀಸನ್ 4 ಮತ್ತು ಇತರ ಟಿವಿ ಯೋಜನೆಗಳಲ್ಲಿ ಕೂಡ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!