SHOCKING NEWS | ಶಂಕಿತ ರೇಬಿಸ್‌ಗೆ ಹವ್ಯಾಸಿ ನಾಟಕ ಕಲಾವಿದ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಶಂಕಿತ ರೇಬಿಸ್‌ಗೆ ಹವ್ಯಾಸಿ ನಾಟಕ ಕಲಾವಿದ,ಬಿಜೆಪಿ ಕಾರ್ಯಕರ್ತ ಬಲಿಯಾದ ಘಟನೆ ಸೋಮವಾರ ಸಂಭವಿಸಿದೆ.

ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ(೩೧)ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿಮರಿ ಕಡಿದಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಸಂಕಟ, ಜ್ವರ ಉಲ್ಬಣಗೊಂಡ ಹಿನ್ನಲೆಯಲ್ಲಿ, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ. ಅವರನ್ನು ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ನೀಡಿದ ಸಲಹೆಯಂತೆ ತಕ್ಷಣ ಅವರು ವೆನ್ ಲಾಕ್ ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.

ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ. ಇಂಥ ಸಂದರ್ಭದಲ್ಲಿ ಹೆಚ್ಚಿನ ನಿಗಾ ವಹಿಸುವುದು, ತಕ್ಷಣ ಚಿಕಿತ್ಸೆ ಕೊಡಿಸುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ. ನಾಯಿ ಕಡಿದ ಬಳಿಕ ಶೀಘ್ರ ಚಿಕಿತ್ಸೆ ಪಡೆದಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ, ಅದಾಗಲೇ ರೇಬಿಸ್ ಲಕ್ಷಣಗಳು ಉಲ್ಬಣಗೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!