SHOCKING NEWS | ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿಯಲ್ಲಿ ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ನಡೆದಿದೆ.

ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ ಕಾರ್ಮಿಕ ಅಕ್ಬರ್ (36) ಎಂಬುವವರು ಮೃತಪಟ್ಟಿದ್ದಾರೆ.

ಕಳೆದ 2 ದಿನದ ಹಿಂದೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!