SHOCKING NEWS | ಬಿಜೆಪಿ ನಾಯಕಿ ಖುಷ್ಭೂ ಸುಂದರ್ ಆರೋಗ್ಯದಲ್ಲಿ ಏರುಪೇರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ನಾಯಕಿ,ನಟಿ ಖುಷ್ಭೂ ಸುಂದರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸ್ವತಃ ನಟಿ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಯ ಬೆಡ್ ಮೇಲೆ ಇರುವ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ತಾನು ಅಡೆನೊ ವೈರಸ್ ಸೋಂಕಿಗೆ ಒಳಗಾಗಿದ್ದು, ತುಂಬಾ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದಾರೆ. ಇನ್ನು ಯಾರಿಗಾದ್ರು ವೈರಸ್ ತಗುಲಿರುವ ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷಿಸಬೇಡಿ ಎಂದು ಖುಷ್ಬೂ ಟ್ವಿಟರ್ ವೇದಿಕೆಯಲ್ಲಿ ಸಲಹೆ ನೀಡಿದ್ದಾರೆ.

ಸಧ್ಯ ಈ ಪೋಸ್ಟ್ ವೈರಲ್ ಆಗುತ್ತಿದ್ದು, ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅದಷ್ಟೂ ಬೇಗ ಚೇತರಿಸಿಕೊಳ್ಳಿ ಎಂದು ಹಾರೈಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!