SHOCKING NEWS | ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಖಾಸಗಿ ಬ್ಯಾಂಕ್ ಉದ್ಯೋಗಿ ಮೃತದೇಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಬ್ಯಾಂಕ್ ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಬೆಂಕಿಯಿಂದ ಸುಟ್ಟ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.

ರಾಜ್ ಗೋಪಾಲ್ ಸಾಮಗ(42) ಮೃತಪಟ್ಟವರು.
ಉಡುಪಿ ಜಿಲ್ಲೆಯ ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ಹೊಗೆಯನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಕೋಣೆ ಬಾಗಿಲು ಒಳಗಡೆಯಿಂದ ಲಾಕ್ ಆಗಿದ್ದ ಕಾರಣ ಬಾಗಿಲನ್ನು ಒಡೆದು ಪರಿಶೀಲಿಸಿದಾಗ ರಾಜ್ ಗೋಪಾಲ್ ಸಾಮಗ ಅವರ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೈದರಾಬಾದ್ ನ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಗೋಪಾಲ್ ಅವರು ಒಂದು ತಿಂಗಳ ಹಿಂದೆ ಮಂಗಳೂರಿಗೆ ವರ್ಗಾವಣೆ ಆಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!