ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ದನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಪವನ್ (19) ಮೃತ ಯುವಕ. ಪವನ್ ತಂದೆಯ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಛಿದ್ರ ಛಿದ್ರಗೊಂಡಿದೆ.
ಕಾಡುಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.