SHOCKING NEWS | ಕನ್ನಡ ಕಿರುತೆರೆ ಖ್ಯಾತ ನಟ ಮಂಡ್ಯ ರವಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ನಿಧನರಾಗಿದ್ದಾರೆ.ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ರಂಗಭೂಮಿ ಹಿನ್ನೆಲೆಯಿಂದ ಬಂದ ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.

ನಟ ರವಿ ಅನೇಕ ಧಾರಾವಾಹಿಗಳಲ್ಲಿ ಮಿಂಚಿದ್ದಾರೆ. ಚಿತ್ರಲೇಖ, ಮಿಂಚು, ಮುಕ್ತ ಮುಕ್ತ, ವರಲಕ್ಷ್ಮೀ ಸ್ಟೋರ್ಸ್ ಮುಂತಾದ ಧಾರಾವಾಹಿಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕ್ರೈಂ ಫೈಲ್ ಕಾರ್ಯಕ್ರಮವನ್ನು ರವಿಪ್ರಸಾದ್ ನಿರೂಪಣೆ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!