SHOCKING NEWS | ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ಕಲಾಲೀನ

ಹೊಸದಿಗಂತ, ಮಂಗಳೂರು:

ತೆಂಕುತಿಟ್ಟಿನ ಮೇರು ಕಲಾವಿದ, ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ (ಕುಂದಾಪುರದ ಕೃಷ್ಣ ಗಾಣಿಗ) (78) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು.

ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದಿದ್ದ ಇವರ ಶ್ರೀ ದೇವೀ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ.

ಉಡುಪಿ ಕಲಾರಂಗ ಪ್ರಶಸ್ತಿ,ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಯಕ್ಷಧ್ರುವ ಪಟ್ಲ ಪ್ರತಿಷ್ಠಾನ ಪ್ರಶಸ್ತಿ,ಡಾ.ಜಿ. ಶಂಕರ ಫ್ಯಾಮಿಲಿ ಟ್ರಸ್ಟ್ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ ಇವರಿಗೆ ಸಂದಿದೆ.

ಮೃತರು ಪತ್ನಿ,ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 8.30ರ ಹೊತ್ತಿಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!