Wednesday, August 10, 2022

Latest Posts

SHOCKING NEWS | ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಅನೇಕರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ದುರ್ಘಟನೆಯ ಸಂದರ್ಭ ಆಸ್ಪತ್ರೆಯಲ್ಲಿ ಎಷ್ಟು ರೋಗಿಗಳಿದ್ದರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss