SHOCKING NEWS | ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ.

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.

ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!