SHOCKING NEWS | ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀರಾಮ ಸೇನೆಯ ಇಲ್ಲಿನ ಜಿಲ್ಲಾ ಘಟಕದ ಮುಖ್ಯಸ್ಥ ರವಿ ಕೋಕಿತ್ಕರ್ ಮೇಲೆ ಶನಿವಾರ ಸಂಜೆ ಗುಂಡಿನ ದಾಳಿ ನಡೆದಿದೆ.
ವಿವಿಧ ಹಿಂದು ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ
ರವಿ ಕೋಕಿತ್ಕರ್ ಅವರು ಶನಿವಾರ ಸಾಯಂಕಾಲ ಬೆಳಗಾವಿ ಮಹಾನಗರದ ಹಿಂಡಲಗಾ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಗುಂಡು ರವಿ ಅವರ ಕುತ್ತಿಗೆ ಭಾಗಕ್ಕೆ ತಗುಲಿದೆ. ಅವರನ್ನು ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಹಿಂದು ಸಂಘಟನೆಗಳ ಕಾರ್ಯಕರ್ತ ರವಿ ಅವರ ಗುಂಡಿನ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರವಿ ಅವರ ಮೇಲೆ ಗುಂಡಿನ ದಾಳಿ ನಡೆದಿರುವ ಹಿಂಡಲಗಾ ಹಾಗೂ ಬೆಳಗಾವಿ ಮಹಾನಗರದಲ್ಲಿ ಪೊಲೀಸರು ಬಿಗಿ ಬಂದೋಬಸ್ತ ವ್ಯವಸ್ಥೆ ಕಲ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!