SHOCKING NEWS | ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿರುವ ಬಾಲಕಿಯನ್ನು ಮೊದಲು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಡೆಂಘಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ ಗೆ ಕಳುಹಿಸಿದ್ದು, ಸ್ಯಾಂಪಲ್ ರಿಪೋರ್ಟ್ ಝೀಕಾ ಪಾಸಿಟಿವ್ ರಿಪೋರ್ಟ್ ಬಂದಿದೆ. ನಂತರ ಬಾಲಕಿ ಕುಟುಂಬದವರ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ರಾಯಚೂರು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪುಣೆಯ ವೈರಾಲಜಿ ಲ್ಯಾಬ್ ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ರಾಯಚೂರು ಬಾಲಕಿಯ ಮೇಲೆ ತೀವ್ರ ನಿಗಾವಹಿಸಲಾಗಿದ್ದು, ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!