ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಈ ಪ್ರಕರಣಗಳನ್ನು ಎದುರಿಸಲು ಕೇಂದ್ರ ಸರ್ಕಾರವು 23 ನಾಯಿ ತಳಿಗಳನ್ನ ನಿಷೇಧಿಸಿದೆ. ಹೀಗಾಗಿ, ಪಟ್ಟಿ ಮಾಡಲಾದ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ.
ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಸ್, ರೊಟ್‌ವೀಲರ್, ಟೆರಿಯರ್‌ಗಳು, ರೊಡೇಸಿಯನ್ ರಿಡ್ಜ್‌ಬ್ಯಾಕ್, ವುಲ್ಫ್ ಡಾಗ್ಸ್, ಕೆನಾರಿಯೊ, ಅಕ್ಬಾಶ್ ಡಾಗ್, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ ಈ ನಾಯಿಗಳನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿದ್ದು ಈ 23 ಶ್ವಾನಗಳನ್ನು ನಿಷೇಧಿಸಲಾಗಿದೆ.
ದೆಹಲಿ ಹೈಕೋರ್ಟ್‌ನ ಆದೇಶದಂತೆ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜಂಟಿ ಸಮಿತಿಯ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಮಿಶ್ರತಳಿಗಳೂ ಸೇರಿವೆ. ಹೆಚ್ಚುವರಿಯಾಗಿ, ಪಶುಸಂಗೋಪನಾ ಆಯುಕ್ತರ ಅಧ್ಯಕ್ಷತೆಯ ತಜ್ಞರ ಸಮಿತಿಯು ಅಪಾಯಕಾರಿ ನಾಯಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ.