SHOCKING NEWS | ಆಂಧ್ರಪ್ರದೇಶದ ಮಾಜಿ ಸಿಎಂ ದಿ.NTR ಪುತ್ರಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ಅವರು ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಮಾ ಮಹೇಶ್ವರಿ ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಸೋಮವಾರ, ಅವರು ತನ್ನ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ವರದಿಯಾಗಿದೆ.
ಜುಬಿಲಿ ಹಿಲ್ಸ್ ಪೊಲೀಸರು ಶವವನ್ನು ಶವಪರೀಕ್ಷೆಗಾಗಿ ಸ್ಥಳಾಂತರಿಸಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!