SHOCKING NEWS | ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬಂತು ಜೀವ ಬೆದರಿಕೆ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ.
ಈ ಸಂಬಂಧ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ.
ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ.
ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ.
ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ.
ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ, ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!