SHOCKING NEWS | KGF ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ .ರಾವ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೆಜಿಎಫ್೨ ಸಿನಿಮಾದಲ್ಲಿ ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.

ಡಿಸೆಂಬರ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಜಿ .ರಾವ್ ಅವರನ್ನು ತೀವ್ರ ನಿಗಾಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೈಟ್ ಆಗಿತ್ತು. ಕೆಜಿಎಫ್ ನಂತರ ಕೃಷ್ಣ ಜಿ ರಾವ್ ಅವರಿಗೆ ಹಲವಾರು ಅವಕಾಶಗಳು ಒದಗಿ ಬಂದವು. ಇದೀಗ ಈ ಚಿತ್ರದ ಜತೆ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿಯೂ ಅವಕಾಶ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!