SHOCKING NEWS | ಮಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿನ ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿದೆ.

ಗುರುವಾರ ಸಂಜೆ ವೇಳೆ ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆ ದಟ್ಟವಾಗಿ ಹರಡಿದೆ.

ಅವಘಡದಿಂದ ಫ್ಯಾಕ್ಟರಿಗೆ ದೊಡ್ಡ ಮೊತ್ತದ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳದ ಸಿಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!