Thursday, September 4, 2025

SHOCKING NEWS | ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಒಂದೂವರೆ ವರ್ಷದ ಮಗು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಒಂದೂವರೆ ವರ್ಷದ ಮಗುವೊಂದು ಸಾವನ್ನಪ್ಪಿದೆ.

ಮೃತರನ್ನು ನೇಪಾಳ ಮೂಲದ ಪುಷ್ಕರ್ ಕುಮಾರ್ (25) ಮತ್ತು ಜ್ಯೋತಿ ಕುಮಾರಿ (22) ಅವರ ಪುತ್ರಿ ಅನು ಎಂದು ಗುರುತಿಸಲಾಗಿದೆ. ಈ ದಂಪತಿಗಳು ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಅಪಾರ್ಟ್‌ಮೆಂಟ್‌ನ ಸೆಲ್ಲರ್‌ನಲ್ಲಿರುವ ಚಿಕ್ಕ ಕೋಣೆಯಲ್ಲಿ ವಾಸವಾಗಿದ್ದರು.

ದುರಂತ ಸಂಭವಿಸಿದಾಗ ಮಗು ಮನೆಯಲ್ಲಿ ಒಬ್ಬಂಟಿಯಾಗಿತ್ತು. ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಈ ಘಟನೆ ಸಂಭವಿಸಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ