SHOCKING NEWS | ನ್ಯೂಯಾರ್ಕ್‌ನಲ್ಲಿ ಭಾರತೀಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಉಪನ್ಯಾಸ ನೀಡಲು ಮುಂದಾಗಿದ್ದ ಭಾರತದ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕುವಿನಿಂದ ಮಾರಣಾಣಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಲೇಖಕ ಸಲ್ಮಾನ್ ರಶ್ದಿ ಅವರು ಪಶ್ಚಿಮ ನ್ಯೂಯಾರ್ಕ್ʼನಲ್ಲಿ ಉಪನ್ಯಾಸ ನೀಡಲು ಹೊರಟಿದ್ದಾಗ ಶುಕ್ರವಾರ ಚೂರಿಯಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.
ಚೌಟೌಕ್ವಾ ಇನ್ಸ್ಟಿಟ್ಯೂಷನ್ʼನಲ್ಲಿ ಒಬ್ಬ ವ್ಯಕ್ತಿಯು ವೇದಿಕೆಗೆ ನುಗ್ಗಿ ಲೇಖಕನಿಗೆ ಚೂರಿಯಿಂದ ಇರಿದಿದ್ದಾನೆ ಎನ್ನಲಾಗ್ತಿದೆ.
ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಸಲ್ಮಾನ್ ರಶ್ದಿ ಕಳೆದ 20 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ ಅಂತ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!