ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಡಹಗಲೇ ದೆಹಲಿಯಲ್ಲಿ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ.
ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ.
ಮೃತರನ್ನು ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.