Wednesday, March 29, 2023

Latest Posts

SHOCKING NEWS | ಮಂಗಳೂರಿನ ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿಯ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬ್ಬಂದಿಯನ್ನುಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ.

ಅತ್ತಾವರ ನಿವಾಸಿ ರಾಘವ (50) ಹತ್ಯೆಗೀಡಾದವರು.

ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇ ತಿಳಿದು ಬಂದಿಲ್ಲ.‌ ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!