ಅಪ್ರಾಪ್ತೆ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಹೊಸದಿಗಂತ ದಿಜಿಟಲ್‌ ಡೆಸ್ಕ್‌
ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಾಯಿಯ ಎದುರೇ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಅಘಾತಕಾರಿ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ದಿಯೋಘರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಕಾಮುಕರು ಅಡ್ಡಗಟ್ಟಿದ್ದಾರೆ.
ಆನಂತರ ಅವರಿಬ್ಬರನ್ನು ದಾರಿಯಲ್ಲಿ ಸಾಗಲು ಬಿಡದೆ, ಅಪ್ರಾಪ್ತೆಯನ್ನು ಬಲವಂತವಾಗಿ ಪಕ್ಕದ ಪೊದೆಯತ್ತ ಕರೆದೊಯ್ದರು. ತಾಯಿ ತಡೆಯಲು ಮುಂದಾದಾಗ ಆಕೆಯನ್ನು ಥಳಿಸಿ ನಂತರ ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆಕೆಯ ತಾಯಿ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಿಯೋಘರ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಸುಭಾಷ್ ಚಂದ್ರ ಜಾಟ್ ಮಾತನಾಡಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿಗಳನ್ನು ನಿರೀಕ್ಷಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!