SHOCKING NEWS | ಶಾಸಕ ಬೈರತಿ ಬಸವರಾಜ್ ಅವರಿಗೆ ಸೇರಿದ ಕಾರು ಅಪಘಾತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಬೈರತಿ ಬಸವರಾಜ್ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಎರೆ ಕೆನಾಲ್ ಬಳಿ ನಡೆದಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಈ ಕಾರಿನಲ್ಲಿ ಶಾಸಕ ಬೈರತಿ ಬಸವರಾಜ್ ಇರಲಿಲ್ಲ. ಅವರು ಬೇರೆಯವರ ಕಾರಿನಲ್ಲಿ ತೆರಳುತ್ತಿದ್ದರು. ಅವರಿದ್ದ ಕಾರಿನ ಹಿಂದೆ ಅಪಘಾತಕ್ಕೀಡಾದ ಕಾರು ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!