SHOCKING NEWS | ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಒಂದು ಜೀವ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಒಂದು ಜೀವ ಬಲಿಯಾಗಿದೆ.

ದುಬೈನಿಂದ ಕೇರಳಕ್ಕೆ ಬಂದಿದ್ದ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನು ಕೇರಳ ಅರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

22 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ವ್ಯಕ್ತಿ ಶನಿವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ತ್ರಿಶ್ಯೂರ್‌ ಜಿಲ್ಲೆಯ ಚಾವಕ್ಕಾಡ್‌ನ 22 ವರ್ಷದ ಯುವಕನಿಗೆ ಯುಎಇ ನಲ್ಲೆ ಸೋಂಕು ತಗುಲಿತ್ತು. ಆದರೆ ಆತ ಈ ವಿಷಯವನ್ನು ಮುಚ್ಚಿಟ್ಟು ಅವರು ಊರಿಗೆ ಮರಳಿದ್ದರು . ಜುಲೈ 27ರಂದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಂಕಿಪಾಕ್ಸ್ ಪತ್ತೆಯಾಗಿ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ಕಳುಹಿಸಲಾಗಿತ್ತು. ಪರೀಕ್ಷೆಯ ವರದಿಯು ಇನ್ನೂ ಬಂದಿಲ್ಲ ಎಂದು ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!