SHOCKING NEWS | ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಕಾರು ಅಪಘಾತ: ಪುತ್ರ-ಸೊಸೆಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್‌

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.

ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ನಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ (70), ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿಂದಾಲ್ ಮೋದಿ (35) ಹಾಗೂ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್‌ ಮೋದಿ (06) ಹಾಗೂ ಕಾರು ಚಾಲಕ ಸತ್ಯನಾರಾಯಣ ಚಾಲಕ (46) ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೋದಿ ಸಹೋದರನ ಮೊಮ್ಮಗನ ಕಾಲಿಗೆ ಹಾಗೂ ಪ್ರಹ್ಲಾದ್‌ ಮೋದಿಗೆ ಮುಖದ ಬಳಿ ಗಾಯವಾಗಿದೆ. ಉಳಿದ ಯಾರಿಗೂ ದೊಡ್ಡ ಪ್ರಮಾಣದಲ್ಲಿ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಸಿಎಂ ಕಚೇರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳದಲ್ಲೇ ಇದ್ದು ಸನ್ನಿವೇಶ ಗಮನಿಸುತ್ತಿದ್ದಾರೆ. ವೈದ್ಯರಿಂದ ಚಿಕಿತ್ಸೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!