ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜಮ್ಮು ಮತ್ತು ಕಾಶ್ಮೀರದ ಸೋನಮಾರ್ಗ್ನ ಸರ್ಬಲ್ ಪ್ರದೇಶದಲ್ಲಿ ಹಿಮಪಾತ ಉಂಟಾಗಿದೆ.
ಇಲ್ಲಿ ಹೈದರಾಬಾದ್ ಮೂಲದ ಮೆಘಾ ಎಂಜಿನಿಯರಿಂಗ್ ಆಯಂಡ್ ಇನ್ಫಾಸ್ಟ್ರಕ್ಚರ್ (ಎಂಇಐಎಲ್) ಸಂಸ್ಥೆ ಕಾಮಗಾರಿ ನಡೆಸುತ್ತಿದ್ದು, ಘಟನೆಯಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಕಾಣೆಯಾಗಿರುವುದಾಗಿ ವರದಿಯಾಗಿದೆ.
ಹಿಮದಡಿ ಸಿಲುಕಿದ್ದ ಕಾರ್ಮಿಕನ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಪೊಲೀಸರು, ಎಸ್ಡಿಆರ್ಎಫ್ ತಂಡ, ಬೀಕಾನ್ ತಂಡ, ಎಂಇಐಎಲ್ ಮತ್ತು ಸೇನೆಯು ಹಿಮವನ್ನು ತೆಗೆಯುವ ಕೆಲಸ ಮಾಡುತ್ತಿದೆ.
ಸ್ಥಳದಲ್ಲಿ ವೈದ್ಯಕೀಯ ತಂಡ ಹಾಗೂ ಆಂಬುಲೆನ್ಸ್ ಅನ್ನೂ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶ, ಹಿಮಪಾತದ ಸಾಧ್ಯತೆಯಿರುವಂತಹ ಪ್ರದೇಶಕ್ಕೆ ತೆರಳಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಲಾಗಿತ್ತು. ಜ.12 ಮತ್ತು 13ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಸಿದೆ.