ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಥಿಕ ಬಿಕ್ಕಟ್ಟಿನಿಂದ ನಲುಗುಗಿರುವ ಶ್ರೀಲಂಕಾದಲ್ಲಿ ಅಧ್ಯಕ್ಷರ ನಿವಾಸವನ್ನು ಆಕ್ರಮಿಸಿಕೊಂಡ ಪ್ರತಿಭಟನಾಕಾರರ ಗುಂಪು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ.
ಈಗಾಗಲೇ ಪ್ರಧಾನಿ ರನಿಲ್‌ಸಿಂಗ್ ಅವರು ರಾಜೀನಾಮೆ ನೀಡಿದ್ದು, ಇತ್ತ ಸಂಜೆಯ ವೇಳೆಗೆ ಪ್ರಧಾನಿ ನಿವಾಸಕ್ಕೆ ಪ್ರತಿಭಟನಾಕಾರರ ದಾಳಿ ನಡೆಸಿದ್ದಾರೆ.
#WATCH | Sri Lanka: Amid massive unrest in the country, protestors set ablaze the private residence of Sri Lankan PM Ranil Wickremesinghe#SriLankaCrisis pic.twitter.com/BDkyScWpui
— ANI (@ANI) July 9, 2022
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಸಿಟ್ಟಿಗೆದ್ದ ಜನರು ಶನಿವಾರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಇದಕ್ಕೂ ಮುನ್ನ ಭದ್ರತಾ ಸಿಬ್ಬಂದಿ ಹಾಗೂ ಜನಸಮೂಹದ ನಡುವೆ ಮಾತಿನ ಚಕಮಕಿ ನಡೆದಿದೆ.